
ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂ ಜಾರಿಗೆ ತಂದರೂ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನಿಂತಿಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನೊಂದ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರನಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
36 ವರ್ಷದ ಶಿವಾನಂದ್ ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಶಿವಾನಂದ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.
ಶಿವಾನಂದ್ ಕಾರ್ತಿಕ್ ಬಳ್ಳಾರಿ ಎಂಬುವವರಿಂದ 4 ಲಕ್ಷ ಸಾಲ ಪಡೆದಿದ್ದರಂತೆ 4 ಲಕ್ಷಕ್ಕೆ 4 ಲಕ್ಷ ಬಡ್ಡಿ ಹೇರಿದ್ದರಂತೆ. ಸಾಲ ಮರುಪಾವತಿ ಮಾಡಿದ್ದರೂ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಲೇ ಇದ್ದರಂತೆ. ಇದರಿಂದ ಬೇಸತ್ತ ಶಿವಾನಂದ್ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.