ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.
ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು. ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದ್ದಾರೆ.
ರಾಜ್ಯದ ವಿವಿಧೆಡೆ ಖಾಸಗಿ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗಿದ್ದು, ಹೊಸ ಕಾನೂನಿನ ಮೂಲಕ ಮೀಟರ್ ಬಡ್ಡಿ ಮಾಫಿಯಾ, ಖಾಸಗಿ ಹಣಕಾಸು ಸಂಸ್ಥೆಗಳ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ನಿಗದಿತ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸುವಂತಿಲ್ಲ. ಸಾಲ ವಸೂಲಿಗೆ ಕಿರುಕುಳ ನೀಡಿದಲ್ಲಿ ಕನಿಷ್ಠ 10 ವರ್ಷ ಜೈಲು, ಲಕ್ಷಾಂತರ ರೂ. ದಂಡ ವಿಧಿಸುವ ಬಗ್ಗೆ ಕಾನೂನು ತರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.