
ವಿಜಯಪುರ: ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಕೆಲ ದಿನಗಳಿಂದ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಹೆಚ್ಚುತ್ತಿದ್ದು, ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಮುಂದಾಗಿದ್ದಾರೆ. ಎಸ್ ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿ, ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ.
ಜಿಲೆಯ ವಿವಿಧೆಡೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದು, ಹಣ, ದಾಖಲೆ ಪತ್ರಗಳು, ಚಿನ್ನಾಭರಣಗಳ ಪರಿಶೀಲನೆ ನಡೆಸಿದ್ದಾರೆ.