
ನವದೆಹಲಿ: 8, 9 ಹಾಗೂ 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಪರೀಕ್ಷಾ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೋರ್ಡ್ ಪರೀಕ್ಷೆ ಮಾದರಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ನಡೆಸಿದ ರಾಜ್ಯ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್ ನ ನ್ಯಾ.ಬೇಲಾ ತ್ರಿವೇದಿ ಪೀಠದಿಂದ 8, 9 ಹಾಗೂ 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳಿಗೆ ಏಕೆ ತೊಂದರೆ ಕೊಡುತ್ತೀರಿ? ರಾಜ್ಯ ಸರ್ಕಾರವೇ ಈ ರೀತಿ ವರ್ತಿಸಬಾಹರು. ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬೇಡಿ. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ಒಳ್ಳೆಯ ಶಾಲೆಗಳನ್ನು ತೆರೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.