
ಎದೆ ಹಾಲು ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ನವಜಾತ ಶಿಶು ಮೃತಪಟ್ಟ ಘಟನೆ ಪೆರ್ಲ ಸಮೀಪದ ಉಕ್ಕಿನಡ್ಕದಲ್ಲಿ ನಡೆದಿದೆ.
ಅಬ್ದುಲ್ ರೆಹಮಾನ್ ಮತ್ತು ತಾಹಿರಾ ದಂಪತಿಯ 25 ದಿನದ ಮಗು ಎದೆ ಹಾಲು ಗಂಟಲಲ್ಲಿ ಸಿಲುಕಿ ಮೃತಪಟ್ಟಿ. ತಾಯಿ ಎದೆ ಹಾಲು ಉಣಿಸುತ್ತಿದ್ದ ಸಂದರ್ಭದಲ್ಲಿ ಮಗುವಿಗೆ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದೆ. ಅಸ್ವಸ್ಥಗೊಂಡ ಶಿಶುವನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಈ ವೇಳೆಗೆ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.