ಬೆಂಗಳೂರು: ಹಾಲು ಪೂರೈಕೆ ಮಾಡಿದ ರೈತರಿಗೆ ಹಲವು ತಿಂಗಳಿನಿಂದ ಬಾಕಿ ಉಳಿದ ಪ್ರೋತ್ಸಾಹ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸಭೆ ನಡೆಸಿ ಹಾಲು ಉತ್ಪಾದಕ ರೈತರಿಗೆ ಬಾಕಿ ಉಳಿದ ಪ್ರೋತ್ಸಾಹ ಧನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ರಾಜಣ್ಣ ಅವರು, ನಂದಿನಿ ಮತ್ತು ಅಮುಲ್ ವಿಲೀನ ಸಾಧ್ಯವೇ ಇಲ್ಲ. ಅಂತಹ ಪ್ರಯತ್ನಗಳು ನಡೆದರೂ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯದಲ್ಲೇ ಕೆಎಂಎಫ್ ಗೆ ಚುನಾವಣೆ ನಡೆಯಲಿದ್ದು, ನಂತರ ಕೆಎಂಎಫ್ ನಂದಿನಿ ಸಂಸ್ಥೆಯನ್ನು ಮತ್ತಷ್ಟು ಶಕ್ತಿಶಾಲಿಯಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಾಲು ಉತ್ಪಾದಕ ರೈತರಿಗೆ ಹಾಲಿನ ಪೂರೈಕೆ ಮಾಡಿದ ಸಬ್ಸಿಡಿ ಬಾಕಿ ಇದ್ದು, ಎಷ್ಟೇ ಬಾಕಿ ಇದ್ದರೂ ಕೂಡ ಸಬ್ಸಿಡಿ ಮೊತ್ತ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.