ಬೆಂಗಳೂರು: ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಉಂಟಾಗುವ ಭೀತಿ ಹಿನ್ನೆಲೆಯಲ್ಲಿ ಕ್ಷೀರಭಾಗ್ಯ ಯೋಜನೆಯಡಿ ಹಾಲಿನಪುಡಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಿಎಂ, ರಾಜ್ಯದಲ್ಲಿ ಹಾಲಿನ ಬೇಡಿಕೆ ಕಡಿಮೆಯಾಗಿದ್ದು, ಹೈನುಗಾರರಿಗೆ ತೊಂದರೆಯಾಗದಂತೆ ಹೆಚ್ಚುವರಿ ಹಾಲಿನಿಂದ ಪುಡಿ ತಯಾರಿಸಲು ನಿರ್ಧರಿಸಲಾಗಿದೆ. ಹೀಗೆ ತಯಾರಿಸಲಾದ ಹಾಲಿನ ಪುಡಿಯನ್ನು ಶಾಲಾ ಮಕ್ಕಳಿಗೆ ಅರ್ಧ ಕೆಜಿಯಂತೆ ಜೂನ್ ಮತ್ತು ಜುಲೈ ತಿಂಗಳಿಗೆ ವಿತರಿಸಲಾಗುವುದು. ಶಾಲೆಗಳು ಮುಚ್ಚಿರುವುದರಿಂದ ಮಕ್ಕಳಿಗೆ ಬಿಸಿಯೂಟ ಬದಲಿಗೆ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಇದರೊಂದಿಗೆ ಹಾಲಿನಪುಡಿ ನೀಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸರ್ಕಾರಕ್ಕೆ 100 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಹೇಳಲಾಗಿದೆ.