ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಮತ್ತು ಅರ್ಧ ಲೀಟರ್ ಪ್ಯಾಕೆಟ್ ಗಳಲ್ಲಿ 50 ಮಿಲಿ ಹೆಚ್ಚುವರಿ ಹಾಲು ನೀಡಿ ಎರಡು ರೂಪಾಯಿ ದರ ಹೆಚ್ಚಳ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಹಾಲು ಉತ್ಪಾದನೆ ಕುಸಿತವಾದಲ್ಲಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ಪ್ಯಾಕೆಟ್ ಗಳಲ್ಲಿ 50 ಮಿಲಿ ಕಡಿಮೆ ಮಾಡಿ 2 ರೂ. ಇಳಿಕೆ ಮಾಡುವ ಸಾಧ್ಯತೆ ಇದೆ.
ಹೆಚ್ಚುವರಿ ಹಾಲು ನೀಡಿ ಹೆಚ್ಚುವರಿಯಾಗಿ 2 ರೂ. ಪಡೆಯುತ್ತಿರುವ ನಿರ್ಧಾರವನ್ನು ಕೆಎಂಎಫ್ ಹಿಂಪಡೆಯುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹಾಲು ಉತ್ಪಾದನೆ ಇಳಿಮುಖವಾಗುವ ಸಂಭವವಿದೆ. ಮುಂದಿನ ಎರಡು ಮೂರು ತಿಂಗಳಲ್ಲಿ ಹಾಲಿನ ಉತ್ಪಾದನೆಯ ಬಗ್ಗೆ ಪರಿಶೀಲನೆ ನಡೆಸಿ ಹೆಚ್ಚುವರಿ ಹಾಲು ನೀಡಿ ಎರಡು ರೂಪಾಯಿ ಹೆಚ್ಚಿನ ದರ ವಿಧಿಸುತ್ತಿರುವ ನಿರ್ಧಾರ ಹಿಂಪಡೆಯುವ ಬಗ್ಗೆ ಚರ್ಚೆ ಕೆಎಂಎಫ್ ತೀರ್ಮಾನಿಸಲಿದೆ. ಹಾಲು ಉತ್ಪಾದನೆ ಹೆಚ್ಚಾಗಿದ್ದರಿಂದ ಹಾಲು ಮತ್ತು ದರ ಹೆಚ್ಚಳ ಮಾಡಲಾಗಿದೆ. ಹಾಲು ಉತ್ಪಾದನೆ ಕಡಿಮೆಯಾದಲ್ಲಿ ದರ ಇಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹಾಲಿನ ಮಾದರಿಯಲ್ಲೇ ಮೊಸರಿನ ಪ್ರಮಾಣವನ್ನು ಹೆಚ್ಚಿಸಿ ದರ ಹೆಚ್ಚಳ ಮಾಡಲು ಕೆಎಂಎಫ್ ಚಿಂತನೆ ನಡೆಸಿದೆ ಎನ್ನಲಾಗಿದೆ.