ಬೆಂಗಳೂರು: ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಬಮೂಲ್ ನಿಂದ ಸೆ. 22 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಅಧ್ಯಕ್ಷ ನರಸಿಂಹಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ವರ್ಷದಿಂದ ಹಾಲಿನ ದರ ಹೆಚ್ಚಳ ಮಾಡಿಲ್ಲ. ಹಾಲಿನ ದರ ಹೆಚ್ಚಳ ಮಾಡುವಂತೆ ಸಹಕಾರ ಸಚಿವರು ಮತ್ತು ಕೆಎಂಎಫ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ. ಹಾಲು ಉತ್ಪಾದಕರು, ರೈತರು ಸರ್ಕಾರಕ್ಕೆ ಸಾವಿರಾರು ಪತ್ರ ಬರೆದು ದರ ಹೆಚ್ಚಳಕ್ಕೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.
ಸೆ. 22ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ರ್ಯಾಲಿ ನಡೆಸಿ ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಲಾಗುವುದು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಬೆಂಗಳೂರು ಹಾಲು ಒಕ್ಕೂಟದ ವ್ಯಾಪ್ತಿಯ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ರೈತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.