ಬೆಂಗಳೂರು: ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲು ಒಕ್ಕೂಟದವರು ನಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ, ನಮಗೆ ರೈತರು, ಗ್ರಾಹಕರ ಹಿತ ಮುಖ್ಯ. ಹಾಗಾಗಿ ಹಾಲಿನ ದರ ಏರಿಕೆ ತೀರ್ಮಾನ ಮಾಡಿಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.
ಬೇರೆ ರಾಜ್ಯಗಳಿಗೆ ಹೋಲಿಸಿದಾಗ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ಆದರೂ ಎಲ್ಲರ ಹಿತವನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.