ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರ ಮೂರು ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿದ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.
ಹಾಲು ಉತ್ಪಾದಕರಿಗೆ ಹೆಚ್ಚಿನ ಬೆಲೆ ಕೊಡಬೇಕು. ಎಲ್ಲ ಸಾಮಗ್ರಿಗಳ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಕಷ್ಟವಾಗುತ್ತಿದೆ. ಹೀಗಾಗಿ ಹಾಲಿನ ದರ 3 ರೂ. ಹೆಚ್ಚಳ ಮಾಡಬೇಕೆಂದು ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು , ಸಿಎಂ ದರ ಹೆಚ್ಚಳದ ಬಗ್ಗೆ ಆಸಕ್ತಿ ತೋರಿಲ್ಲ ಎನ್ನಲಾಗಿದೆ.
ಹಾಲಿನ ದರ ಹೆಚ್ಚಳ ಮಾಡಿದಲ್ಲಿ ಗ್ರಾಹಕರಿಗೆ ಹೊರೆಯಾಗಲಿದೆ. ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ತಿಳಿಸಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಹಾಲಿನ ದರ ಹೆಚ್ಚಳ ಮಾಡಿಲ್ಲ. ಹಾಲು ಉತ್ಪಾದಕರಿಗೆ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ದರ ಏರಿಕೆ ಅನಿವಾರ್ಯವಾಗಿದ್ದು, ಹೀಗಾಗಿ ಹಾಲಿನ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಿಎಂ ಗೆ ಕೆಎಂಎಫ್ ಮತ್ತೊಮ್ಮೆ ಮನವಿ ಮಾಡಲು ಮುಂದಾಗಿದೆ ಎಂದು ಹೇಳಲಾಗಿದೆ.