ಬೆಂಗಳೂರು: ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.
ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರದಲ್ಲಿ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಿಸುವಂತೆ ಪ್ರಸ್ತಾವನೆ ಬಂದಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ಕೊಟ್ಟ ಬಳಿಕ ಹಾಲಿನ ದರ ಹೆಚ್ಚಳ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಹೆಚ್ಚುವರಿ ನಂದಿನಿ ಹಾಲಿನ ದರ ಕಡಿತ ಮಾಡಲು ನಿರ್ಧರಿಸಲಾಗಿದೆ. ಹೆಚ್ಚುವರಿ 50 ಎಂ.ಎಲ್ ನಂದಿನಿ ಹಾಲಿನ ದರ ಕಡಿತವಾಗಲಿದೆ. 50 ಎಂ ಎಲ್ ಹೆಚ್ಚುವರಿ ನಂದಿನಿ ಹಾಲಿಗೆ 2 ರೂಪಾಯಿ ಏರಿಕೆಯಾಗಿತ್ತು. ಹೆಚ್ಚುವರಿ ದರವನ್ನು ಕಡಿತಮಾಡುವುದರಿಂದ ನಂದಿನಿ ಹಾಲಿನ ದರ ಲೀಟರ್ ಗೆ 44ರಿಂದ 42 ರೂಪಾಯಿಗೆ ಇಳಿಕೆಯಾಗಲಿದೆ ಎಂದು ಹೇಳಿದರು.