ನವದೆಹಲಿ: ‘ಮನ್ ಕಿ ಬಾತ್’ನಲ್ಲಿ ಇಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಇತ್ತೀಚೆಗಷ್ಟೇ ನಿಧನರಾದ ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಅವರ ಸಾಧನೆಯನ್ನು ಕೊಂಡಾಡಿದ್ದಾರೆ.
ಮಿಲ್ಖಾ ಸಿಂಗ್ ಸಾಧನೆ ಮಿಮರೆಯಲು ಸಾಧ್ಯವಿಲ್ಲ. ಕೊರೋನಾ ಮಿಲ್ಖಾ ಸಿಂಗ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಅವರು ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದ್ದರು. ಒಲಿಂಪಿಕ್ಸ್ ನಲ್ಲಿ ಎಲ್ಲರೂ ಭಾಗವಹಿಸಲು ಪ್ರಯತ್ನಿಸಿ ಎಂದು ಮೋದಿ ತಿಳಿಸಿದ್ದಾರೆ.
78ನೇ ‘ಮನ್ ಕಿ ಬಾತ್’ನಲ್ಲಿ ಮಾತನಾಡುತ್ತಿದ್ದ ಮೋದಿ, ಈ ಬಾರಿ ಟೋಕಿಯೋದಲ್ಲಿ ಒಲಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ‘ಚಿಯರ್ ಫಾರ್ ಇಂಡಿಯಾ’ ಘೋಷವಾಕ್ಯ ಹೇಳಿದ ಅವರು, ದೇಶದ ಕ್ರೀಡಾಪಟುಗಳು ಭಾಗಿಯಾಗಲಿದ್ದು, ಈ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಕೊರೋನಾ ವಿರುದ್ಧದ ಹೋರಾಟ ಮುಂದುವರೆಯುತ್ತದೆ. ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಒಂದೇ ದಿನದಲ್ಲಿ ದಾಖಲೆಯ ಸಂಖ್ಯೆಯ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಮೋದಿ ಹೇಳಿದ್ದಾರೆ.