![](https://kannadadunia.com/wp-content/uploads/2024/01/siridhanya-mela.jpg)
ಬೆಂಗಳೂರು : ಜನವರಿ 5ರಿಂದ 7ರವರೆಗೆ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ನಡೆಯಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಕೃಷಿ ಇಲಾಖೆಯು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಸಂಸ್ಥೆಯ ಸಹಯೋಗದೊಂದಿಗೆ ಜನವರಿ 5ರಿಂದ 7ರವರೆಗೆ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ನಡೆಯಲಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಈ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ, ಸಿರಿಧಾನ್ಯ ಉತ್ಪಾದನೆ ಮತ್ತು ರಪ್ತು ಮೂರು ಪಟ್ಟು ಹೆಚ್ಚಿಸುವುದು ಹಾಗೂ ಆರೋಗ್ಯ ದೃಷ್ಟಿಯಿಂಧ ಜನರಿಗೆ ಸಿರಿಧಾನ್ಯಗಳ ಬಳಕೆ ಬಗ್ಗೆ ಅರಿವು ಮೂಡಿಸುವುದು ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.