
ಕೋಲಾರ: ಅಪ್ರಾಪ್ತ ಬಾಲಕಿ ಹಾಗೂ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಿಡಮಾಕನಹಳ್ಳಿ ಗ್ರಾಮದ ರಶ್ಮಿ (16) ಹಾಗೂ ಆಲಹಳ್ಳಿ ಗ್ರಾಮದ ಅಭಿಷೇಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದು, ಯುವಕ ಅಭಿಷೇಕ್ ಸ್ಥಿತಿ ಗಂಭೀರವಾಗಿದೆ.
ಕಳೆದ ಹಲವು ತಿಂಗಳುಗಳಿಂದ ರಶ್ಮಿ ಹಾಗೂ ಅಭಿಷೇಕ್ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸುವ ಆತಂಕದಲ್ಲಿ ಇಬ್ಬರೂ ವಿಷ ಸೇವಿಸಿದ್ದರು. ಬಳಿಕ ವೇಲ್ ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಾಲಕಿ ರಶ್ಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಯುವಕ ಅಭಿಷೇಕ್ ಸ್ಥಿತಿ ಗಂಭೀರವಾಗಿದ್ದು, ಕೋಲಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.