alex Certify SHOCKING NEWS: ಶಾಲೆಯಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಶಿಕ್ಷಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಶಾಲೆಯಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಶಿಕ್ಷಕ ಅರೆಸ್ಟ್

ದಾವಣಗೆರೆ: ಮಕ್ಕಳಿಗೆ ಪಾಠ ಹೇಳಿಕೊಟ್ಟು ವಿದ್ಯೆ, ಬುದ್ಧಿ ಮಹತ್ವ ತಿಳಿಸಿಬೇಕಾಗಿದ್ದ ಶಿಕ್ಷಕನೇ ಶಾಲೆಯಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

ಕಾಮುಕ ಶಿಕ್ಷಕ ಶಾಲೆಯಲ್ಲಿಯೇ ಬಾಯಲಿಕೆಯ ಮೇಲೆ ಅತ್ಯಾಚಾರ ನಡೆಸಿದ್ದು, ಘಟನೆ ನಡೆದು ವಾರದ ಬಳಿಕ ವಿಷಯ ಬಹಿರಂಗವಾಗಿದೆ. ಸಂತ್ರಸ್ತ ಬಾಲಕಿ ತೀವ್ರ ಅನಾರೋಗ್ಯಕ್ಕೀದಾಗಿದ್ದು, ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದುರುವ ಬಗ್ಗೆ ಗೊತ್ತಾಗಿದೆ.

ಶಿಕ್ಷಕನ ಬೆದರಿಕೆಗೆ ಹೆದರಿ ಬಾಲಕಿ ಪೋಷಕರ ಬಳಿಯೂ ಹೇಳದೇ ವಾರದಿಂದ ಸುಮ್ಮನಿದ್ದಳು. ವಿಷಯ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು ದಾವಣಗೆರೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಾಲೆಯಿಂದಲೇ ಶಿಕ್ಷಕನನ್ನು ಬಂಧಿಸಿ ಕರೆದೊಯ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...