ಬೆಂಗಳೂರು: ಪ್ರೌಢ ಶಾಲೆ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಕನಿಷ್ಠ ಅಂಕ ಪರಿಷ್ಕರಿಸಲಾಗಿದೆ.
ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲೆ ಶಿಕ್ಷಕರು ಸ್ನಾತಕೋತ್ತರ ಪದವಿಯಲ್ಲಿ ಶೇಕಡ 55 ರಷ್ಟು ಅಂಕ ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಠ ಶೇಕಡ 50ರಷ್ಟು ಅಂಕ ನಿಗದಿಪಡಿಸಲು ಸಂಪುಟ ಸಭೆ ನಿರ್ಧರಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೇಂದ್ರೀಕೃತ ದಾಖಲಾತಿ ಘಟಕ, ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕ ವೃಂದದ ಆಯ್ಕೆ ಪ್ರಾಧಿಕಾರವೆಂದು ನಿಗದಿಪಡಿಸಲ ತೀರ್ಮಾನಿಸಲಾಗಿದೆ. ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ ಶೇಕಡ 50ರಷ್ಟು ಅಂಕಗಳನ್ನು ನಿಗದಿಪಡಿಸಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.