ನವದೆಹಲಿ: ಕಳೆದ 8 ವರ್ಷಗಳ ಮೋದಿ ಸರ್ಕಾರದ ಅವಧಿಯಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ಶೇ.50ರಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಒಡಿಶಾದ ಅಂಗುಲ್‌ನಲ್ಲಿ ESIC- ನೌಕರರ ರಾಜ್ಯ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರೋಗ್ಯ ರಕ್ಷಣೆ ಮತ್ತು ವಿಮಾ ಸೌಲಭ್ಯಗಳ ಮೂಲಕ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಹೇಳಿದರು.
ಇ-ಶ್ರಮ್ ಪೋರ್ಟಲ್ ನಲ್ಲಿ ಕಾರ್ಮಿಕರನ್ನು ನೋಂದಾಯಿಸಲ್ಪಟ್ಟಿದ್ದು, ಅವರು ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯುತ್ತಾರೆ. ಆರ್ಥಿಕತೆಗೆ ಅವರ ಕೊಡುಗೆ ಅತ್ಯುತ್ತಮವಾಗಿದ್ದು, ಕಾರ್ಮಿಕರಿಗೆ ಕೌಶಲ್ಯ ತರಬೇತಿಯನ್ನು ನೀಡುವುದು ಮುಖ್ಯವಾಗಿದೆ ಎಂದರು.