ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ(43) ಅವರನ್ನು ಉಸಿರುಗಟ್ಟಿಸಿ ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಓರ್ವ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಾಲಕನ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಿರಣ್ ಎಂಬಾತ ಕೊಲೆ ಮಾಡಿರುವ ಶಂಕೆ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ.
ಹಲವಾರು ವರ್ಷಗಳಿಂದ ಕಾರ್ ಚಾಲಕನಾಗಿ ಕಿರಣ್ ಕೆಲಸ ಮಾಡುತ್ತಿದ್ದ. ಒಂದು ವಾರದ ಹಿಂದೆ ಪ್ರತಿಮಾ ಆತನನ್ನು ಕೆಲಸದಿಂದ ತೆಗೆಸಿದ್ದರು. ಇದೇ ವಿಚಾರವಾಗಿ ಅಸಮಾಧಾನ ಕಿರಣ್ ವ್ಯಕ್ತಪಡಿಸಿದ್ದ. ಕಿರಣ್ ಬದಲಿಗೆ ಚೇತನ್ ಎಂಬುವರನ್ನು ಪ್ರತಿಮಾ ಚಾಲಕನಾಗಿ ನೇಮಿಸಿಕೊಂಡಿದ್ದರು. ಈ ಹತ್ಯೆ ಬಳಿಕ ಕಿರಣ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಆತನನ್ನು ಪತ್ತೆ ಮಾಡಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.