
ಬೆಂಗಳೂರು: ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.
ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಅವರನ್ನು ಕೊಲೆ ಮಾಡಲಾಗಿದೆ ಎನ್ನಲಾಗಿತ್ತು. ಹಣ, ಚಿನ್ನಾಭರಣಕ್ಕಾಗಿ ಪ್ರತಿಮಾ ಕೊಲೆಗೆ ಆರೋಪಿ ಕಿರಣ್ ಸಂಚು ರೂಪಿಸಿ ಕೃತ್ಯವೆಸಗಿರುವುದು ಗೊತ್ತಾಗಿದೆ. ಮನೆಗೆ ನುಗ್ಗಿ ಪ್ರತಿಮಾ ಅವರನ್ನು ಕೊಲೆ ಮಾಡಿದ್ದ ಆರೋಪಿ ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದ. ಈ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪೊಲೀಸರು ಘಟನೆ ನಡೆದ ಒಂದು ದಿನದಲ್ಲೇ ಆರೋಪಿ ಕಿರಣ್ ನನ್ನು ಬಂಧಿಸಿದ್ದರು.