alex Certify ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಕಲಬುರಗಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2021-22 ನೇ ಸಾಲಿಗೆ ಅರಿವು ರಿನ್ಯೂವಲ್ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ಧ, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಿ.ಇ.ಟಿ./ನೀಟ್‍ನಲ್ಲಿ ಆಯ್ಕೆಯಾಗಿ ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕಿಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ಬಿಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಷ್ ನಂತಹ ಪದವಿ ಕೋರ್ಸ್‍ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ರಿನ್ಯೂವಲ್ ಸಾಲ ಯೋಜನೆಯಡಿ ಸಾಲ ಪಡೆಯಬಹುದು.

ಸಾಲ ಪಡೆಯಲು ಅನುಕೂಲವಾಗುವಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಒಟ್ಟು ಸಾಲದ ಬಾಕಿಯ ಮೊತ್ತದ ಶೇ. 12 ರಷ್ಟನ್ನು ನಿಗಮದ ಜಿಲ್ಲಾ ಕಚೇರಿಗೆ ಪಾವತಿಸಿದ ನಂತರವೇ ನಿಗಮದ http//kmdconline.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2021 ರ ಡಿಸೆಂಬರ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಆನ್‍ಲೈನ್ ಅರ್ಜಿಯ ಪ್ರತಿಯನ್ನು ಕಲಬುರಗಿ ನಿಗಮದ ಜಿಲ್ಲಾ ಕಚೇರಿಯಲ್ಲಿ 2021ರ ಡಿಸೆಂಬರ್ 31 ರೊಳಗಾಗಿ ಸಲ್ಲಿಸಬೇಕು.

ಮತ್ತಿತರ  ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-232425)ಗೆ ಸಂಪರ್ಕಿಸಲು ಕೋರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...