alex Certify ಸಚಿವ ಬಿ. ನಾಗೇಂದ್ರ ಇಂದು ರಾಜೀನಾಮೆ ಕೊಡಬಹುದು : ಡಿಸಿಎಂ ಡಿ.ಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಬಿ. ನಾಗೇಂದ್ರ ಇಂದು ರಾಜೀನಾಮೆ ಕೊಡಬಹುದು : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಪಕ್ಷ, ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ಅವರು ಇಂದು ರಾಜೀನಾಮೆ ನೀಡಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಸಚಿವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿದೆ. ನಾನು ಗೃಹ ಸಚಿವರು ಸಚಿವ ನಾಗೇಂದ್ರ ಬಳಿ ಚರ್ಚೆ ಮಾಡಿದ್ದೇವೆ, ಅವರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಆದ್ದರಿಂದ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಗೃಹಕಚೇರಿಯಲ್ಲಿ ಡಿಸಿಎಂ ಡಿಕೆಶಿ ಸಭೆ ನಡೆಸಿದರು. ಈ ವೇಳೆ ವಿವಿಧ ಕ್ಷೇತ್ರಗಳ ಫಲಿತಾಂಶದ ಸಂಬಂಧ ಪರಾಮರ್ಶೆ  ನಡೆಸಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...