ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರಗೆ ರಾಜೀನಾಮೆ ನೀಡುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರದಲ್ಲಿ ಸರ್ಕಾರ ಮುಖಭಂಗಕ್ಕೀಡಾಗಬಾರದು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಚರ್ಚಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಡಿಕೆ.ಶಿವಕುಮಾರ್ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಹಾಗೂ ಸಂಭವನೀಯ ಪರುಣಾಮಗಳ ಬಗ್ಗೆಯೂ ಚರ್ಚೆ ನಡೆದಿದೆ. ಸರ್ಕಾರಕ್ಕೆ ಮುಖಭಂಗವಾಗಬಾರದು ಈ ನಿಟ್ಟಿನಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ನಾಗೇಂದ್ರ ಅವರಿಗೆ ರಾಜೀನಾಮೆಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ಅಥವಾ ನಾಳೆ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.