ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಬಡವರಿಗಾಗಿ ಇನ್ನಷ್ಟು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದ್ದಾರೆ.
ಹಿರಿಯೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಣವನ್ನು ಬಡವರು, ದೀನ ದಲಿತರು ಸೇರಿ ಎಲ್ಲಾ ವರ್ಗದವರಿಗೂ ಮತ್ತಷ್ಟು ತಲುಪಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರಿಗೆ ನೀಡಿದ್ದು, ಶೇಕಡ 98 ರಷ್ಟು ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾವಲಂಬನೆಯಿಂದ ಕುಟುಂಬ ಹಾಗೂ ಜೀವನ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.