
ಮೈಸೂರು: ಪೌರ ಕಾರ್ಮಿಕರ ಕಾಯಂಗೆ ಎರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದರು.
ನೇರ ಪಾವತಿಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ನೌಕರರ ಕಾಯಂಗೊಳಿಸಲು ಇರುವ ಕಾನೂನು ತೊಡಕು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.