ಬೆಂಗಳೂರು : RT-PCR ಪರೀಕ್ಷೆ ಹೆಚ್ಚಿಸಲು, ಎಲ್ಲಾ ಆಸ್ಪತ್ರೆಗಳಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಕೊರೊನಾ ರೂಪಾಂತರಿ ಜೆ.ಎನ್.1 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಇಂದು ತುರ್ತು ಸಭೆ ನಡೆಸಿ ಮಾತನಾಡಿದರು.
ಕೊರೂನಾ ಜೆ.ಎನ್.1 ರೂಪಾಂತರಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಜಿಲ್ಲೆಯಾದ್ಯಂತ ಚಳಿಯ ಪ್ರಮಾಣ ಹೆಚ್ಚಾಗಿದೆ. ಕೂರೊನಾ ರೂಪಾಂತರ ತಳಿಯಿಂದ ಹೊಸ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಕೆಮ್ಮು, ನೆಗಡಿ, ದಮ್ಮು, ಶೀತ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಇದರಿಂದ ಸಹಜವಾಗಿಯೇ ಆರೋಗ್ಯ ಇಲಾಖೆಯವರ ಚಿಂತೆ ಮತ್ತಷ್ಟು ಹೆಚ್ಚಿಸಿದೆ. ಯಾರೇ ಕೆಮ್ಮು, ನೆಗಡಿ, ಶೀತ ಜ್ವರದಿಂದ ಬಳಲುತ್ತಿದ್ದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕು. ಕೆಲಸದ ಸ್ಥಳದಲ್ಲಿ ಸ್ಯಾನಿಟೈಸರ್ ಉಪಯೋಗಿಸಬೇಕೆಂದು ಸೂಚನೆ ಕೊಡಲಾಗಿದೆ. ವಿಶೇಷವಾಗಿ ಕೆಮ್ಮು, ನೆಗಡಿ, ಜ್ವರದಿಂದ ಹೆಚ್ಚು ಬಳಲುತ್ತ ಆಸ್ಪತ್ರೆಗೆ ಬಂದರೆ ಅಂತಹವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಕೋವಿಡ್ಗೆ ಬೇಕಾದ ಅಗತ್ಯ ವೈದ್ಯಕೀಯ ಚಿಕಿತ್ಸೆ, ಆಕ್ಸಿಜನ್, ವಂಟಲೇಟರ್ ಸೇರಿದಂತೆ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೋವಿಡ್ RT-PCR ಪರೀಕ್ಷೆಯನ್ನು ಹೆಚ್ಚಿಸಲು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸಲು ವೈದ್ಯಕೀಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬೀದರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ಸಿದ್ಧವಿರಿಸಲಾಗಿದ್ದು ಕೋವಿಡ್ ಸಂಕ್ರಮಣ ತಡೆಯಲು ಎಲ್ಲಾ ಇತರ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ವತಿಯಿಂದ ತೆಗೆದುಕೊಳ್ಳಲಾಗುತ್ತಿದ್ದು ನಾಗರಿಕರು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು ಎಂದು ಕೋರುತ್ತೇನೆ ಎಂದಿದ್ದಾರೆ.