ಬೆಂಗಳೂರು : ಸದ್ದಿಲ್ಲದೇ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.
ಸರಣಿ ಟ್ವೀಟ್ ಮಾಡಿದ ಬಿಜೆಪಿ ತೀವ್ರ ವಾಗ್ಧಾಳಿ ನಡೆಸಿದೆ. ಸಚಿವ ಕೆಜೆ ಜಾರ್ಜ್ ಕಾಣೆಯಾಗಿದ್ದಾರೆ, ಹುಡುಕಿ ಕೊಟ್ಟವರಿಗೆ ಸಿಂಗಲ್ ಫೇಸ್ ವಿದ್ಯುತ್ ಫ್ರೀ ನೀಡಲಾಗುತ್ತದೆ ಬಿಜೆಪಿ ವ್ಯಂಗ್ಯವಾಡಿದೆ.ಕಾಣೆಯಾಗಿದ್ದ ಬಸ್ ಸ್ಟಾಂಡ್ನನ್ನು ಕೊನೆಗೂ ಹುಡುಕಿದ್ದೇವೆ ಎಂದು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಿದ್ದೀರಿ, ಇರಲಿ ನಿಮ್ಮ ಸಾಹಸ ನಿಜಕ್ಕೂ ಶ್ಲಾಘನೀಯ!! ಕರ್ನಾಟಕದಲ್ಲೆಲ್ಲಾ ಕತ್ತಲೆ ಹರಡಿ ನಾಪತ್ತೆಯಾಗಿರುವ ನಿಮ್ಮ ಇಂಧನ ಸಚಿವ ಜಾರ್ಜ್ ಅವರನ್ನು ಹುಡುಕಿ ಕೊಡಿ, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇನ್ನೊಂದು ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದ ಬಿಜೆಪಿ ಮೊದಲ ಅವಧಿಯಲ್ಲೂ ಮೊಬೈಲ್ ಟಾರ್ಚ್ ಹಿಡಿದು ಬಜೆಟ್ ಮಂಡಿಸಿದ ಸಾಧನೆ ನಿಮ್ಮದು… ಎರಡನೇ ಅವಧಿಯಲ್ಲೂ ಇಡೀ ರಾಜ್ಯಕ್ಕೆ ಕತ್ತಲು ನೀಡಿ ಕತ್ಲೇರಾಮಯ್ಯ ಬಿರುದು ನಿಮ್ಮದಾಗಿಸಿಕೊಂಡಿದ್ದೀರಿ ಎಂದು ಬಿಜೆಪಿ ಕಿಡಿಕಾರಿದೆ.