
ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನಗಳ ಬಾಕಿ ಮೊತ್ತವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಮೂಲಕ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನಗಳ ಬಾಕಿ ಮೊತ್ತವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಎರಡೂ ಇಲಾಖೆಗಳ ಅಧಿಕಾರಿಗಳಿಗೆ ಕೋಟಾ ಸೂಚನೆ ನೀಡಿದ್ದಾರೆ.
ಇನ್ನು ಈ ವಿಚಾರವಾಗಿ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 55 ಕೋಟಿ ರೂಪಾಯಿ ಸಿಗಬೇಕಿದೆ. ಇದನ್ನು ಶೀಘ್ರದಲ್ಲೇ ನೀಡಲಾಗುವುದು. ಒಟ್ಟು 1.90 ಲಕ್ಷ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕಿದೆ. ವಾರದೊಳಗಾಗಿ ಈ ವಿದ್ಯಾರ್ಥಿ ವೇತನವು ಮಕ್ಕಳ ಕೈ ಸೇರಲಿದೆ ಎಂದು ಹೇಳಿದ್ರು.