ಬೆಂಗಳೂರು : ರಾಜ್ಯದ 62 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ 113 ತಾಲೂಕುಗಳಲ್ಲಿ ಅಧ್ಯಯನ ಮಾಡಲಾಗಿದ್ದು, 62 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ, 51 ತಾಲೂಕುಗಳಲ್ಲಿ ಮತ್ತೆ ಅಧ್ಯಯನ ಮಾಡಲಾಗುತ್ತದೆ. ಈ ಬಾರಿ ವಾಡಿಕೆಗಿಂತ ಶೇ. 26 ರಷ್ಟು ಮಳೆ ಕಡಿಮೆ ಆಗಿದೆ . ಅದೇ ರೀತಿ ಹೆಚ್ಚುವರಿ 83 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಚಿವರು ಹೇಳಿದರು.
ಈ ಬಾರಿ ಮಳೆ ಕೈಕೊಟ್ಟಿದೆ. ರಾಜ್ಯದಲ್ಲಿ ಬರ ಕಾಡುತ್ತಿದೆ. ಈ ಹಿನ್ನೆಲೆ ರಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಆಗಸ್ಟ್ ನಲ್ಲಿ ಉತ್ತಮ ಮಳೆಯಾಗುತ್ತೆ ಎಂದು ರೈತರು ನಂಬಿಕುಳಿತಿದ್ದರು. ಆದ್ರೆ ಮಳೆ ಅಭಾವದಿಂದ ರಾಜ್ಯದ ರೈತರು ಕಂಗಾಲಾಗಿದ್ದಾರೆ. ರಾಜ್ಯದ 113 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗುತ್ತೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದರು. ಇದೀಗ ರಾಜ್ಯದ 62 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಘೋಷಣೆ ಮಾಡಿದ್ದಾರೆ.