ಬೆಳಗಾವಿ : ‘ಗೃಹಲಕ್ಷ್ಮಿ’ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಖಾರದಪುಡಿ ತಯಾರಿಸುವ ಯಂತ್ರ ಖರೀದಿಸಿದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮದ ಶ್ರೀಮತಿ ತಾಯವ್ವ ಕ ಲಕಮೋಜಿ ಎಂಬ ಮಹಿಳೆ ಗೃಹಲಕ್ಷ್ಮಿ ಹಣ ಕೂಡಿಟ್ಟು, ಮಿರ್ಚಿ ಮಿಕ್ಸರ್ ಮಷಿನ್ (ಖಾರದ ಗಿರಣಿ) ಖರೀದಿ ಮಾಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಹಾರೈಕೆ
ಕುಕಡೊಳ್ಳಿ ಗ್ರಾಮದ ಶ್ರೀಮತಿ ತಾಯವ್ವ ಕ ಲಕಮೋಜಿ ಎಂಬ ಮಹಿಳೆ ಗೃಹಲಕ್ಷ್ಮಿ ಹಣ ಕೂಡಿಟ್ಟು, ಮಿರ್ಚಿ ಮಿಕ್ಸರ್ ಮಷಿನ್ (ಖಾರದ ಗಿರಣಿ) ಖರೀದಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ಮಿರ್ಚಿ ಮಿಕ್ಸರ್ ಮಷಿನ್ ನ್ನು ಉದ್ಘಾಟಿಸಿ, ಮಹಿಳೆಯ ನೂತನ ಉದ್ಯೋಗಕ್ಕೆ ಶುಭ ಕೋರಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆ ಇಂದು ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಣೆಗೊಳಿಸಿದ್ದು, ಸಾಕಷ್ಟು ಬಡ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಯ ಮೂಲಕ ಬದುಕು ಕಟ್ಟಿಕೊಂಡಿರುವುದು ಸಂತಸದ ವಿಷಯ ಎಂದಿದ್ದಾರೆ.
ಈ ಸಂದರ್ಭದಲ್ಲಿ ಚನ್ನಬಸಯ್ಯ ಹಿರೇಮಠ್, ಬಸಯ್ಯ ಚಿಕ್ಕಮಠ್ ವೀರನಗೌಡ ಪಾಟೀಲ, ತಾಯಪ್ಪ ಮರಕಟ್ಟಿ, ಪುಂಡಲೀಕ ಬೈರೋಜಿ, ಕಲ್ಲಪ್ಪ ವಡ್ಡಿನ, ಪರಶುರಾಮ ಕುರುಬರ, ಅನ್ನಪೂರ್ಣ ಪಾಟೀಲ, ಗದಿಗೆಪ್ಪ ವಡ್ಡಿನ, ದೊಡ್ಡಪ್ಪ ದೇಶನೂರ್, ರಾಮಪ್ಪ ಕರವಿನಕೊಪ್ಪ, ಹೊಳೆಪ್ಪ ಹಟ್ಟಿ ಸೇರಿದಂತೆ ಗ್ರಾಮದ ಅನೇಕ ಮಹಿಳೆಯರು ಉಪಸ್ಥಿತರಿದ್ದರು.
– ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವರವಾದ ‘ಗೃಹಲಕ್ಷ್ಮಿ’
ಕುಕಡೊಳ್ಳಿ ಗ್ರಾಮದ ಶ್ರೀಮತಿ ತಾಯವ್ವ ಕ ಲಕಮೋಜಿ ಎಂಬ ಮಹಿಳೆ ಗೃಹಲಕ್ಷ್ಮಿ ಹಣ ಕೂಡಿಟ್ಟು, ಮಿರ್ಚಿ ಮಿಕ್ಸರ್ ಮಷಿನ್ (ಖಾರದ ಗಿರಣಿ) ಖರೀದಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ಮಿರ್ಚಿ ಮಿಕ್ಸರ್ ಮಷಿನ್ ನ್ನು ಉದ್ಘಾಟಿಸಿ, ಮಹಿಳೆಯ ನೂತನ ಉದ್ಯೋಗಕ್ಕೆ ಶುಭ ಕೋರಿದೆ.
ರಾಜ್ಯ ಸರ್ಕಾರದ… pic.twitter.com/kdfGp9zMXc
— Laxmi Hebbalkar (@laxmi_hebbalkar) November 3, 2024