ಬೆಂಗಳೂರು : ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ ಹಿನ್ನೆಲೆ ರಾಜ್ಯಾದ್ಯಂತ ತನಿಖೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ವಿತರಿಸುತ್ತಿರುವ ಪ್ರಕರಣಗಳು ವರದಿಯಾದ ಜಿಲ್ಲೆಗಳಷ್ಟೇ ಅಲ್ಲದೇ ರಾಜ್ಯಾದ್ಯಂತ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ . ಈ ಬಗ್ಗೆ ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಇನ್ನೂ, ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ, ಗೃಹ ಲಕ್ಷ್ಮಿ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಶುಲ್ಕವೂ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಶುಲ್ಕವೂ ಇಲ್ಲ . ಒಂದು ವೇಳೆ ಅರ್ಜಿ ಸಲ್ಲಿಸಲು ಹಣ ತೆಗೆದುಕೊಂಡರೆ ಕರೆ ಅಥವಾ ಎಸ್ ಎಂಎಸ್ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾವುದೇ ಗೊಂದಲಗಳಿದ್ದರೂ 1902 ಸಂಖ್ಯೆಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ SMS ಸಂದೇಶ ಅಥವಾ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.