alex Certify ದಲಿತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಲಿತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ಬೆಂಗಳೂರು: ದಲಿತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದ್ದಾರೆ.

ಜನಾಶೀರ್ವಾದ ಯಾತ್ರೆ ಅಂಗವಾಗಿ ಸೋಮವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 84 ಲೋಕಸಭೆ ಕ್ಷೇತ್ರಗಳಲ್ಲಿ ಅಂಬೇಡ್ಕರ್ ವಸತಿ ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿ ರಾಜ್ಯದಲ್ಲಿ 100 ಜನರಿಗೆ ಐಎಎಸ್ ಮಾಡಿಸುವ ಸಂಕಲ್ಪವನ್ನು ಬಿಜೆಪಿ ಮಾಡಿದ್ದು, ದಲಿತರಲ್ಲಿ ಶೈಕ್ಷಣಿಕ ಕ್ರಾಂತಿಯಾಗಬೇಕೆನ್ನುವ ನಿಟ್ಟಿನಲ್ಲಿ ವಸತಿ ಕಾಲೇಜುಗಳನ್ನು ಆರಂಭಿಸಲಾಗುತ್ತದೆ. ದಲಿತರಿಗೆ ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...