ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ಅವರ ವಿರುದ್ಧ ಕೋಮು ದ್ವೇಷ ಭಾಷಣ ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ದೂರು ದಾಖಲಾಗಿದೆ.
ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಸಚಿವ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಕ್ರೈಸ್ತ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಸಚಿವ ಮುನಿರತ್ನ ಅವರು ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಚುನಾವಣಾಧಿಕಾರಿ ಮನೋಜ್ ಕುಮಾರ್ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.