
ಬೆಂಗಳೂರು: ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಇಳಿಕೆ ಬಗ್ಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಅಗತ್ಯವಿದೆ ಎಂದು ಹೇಳಿದ್ದಾರೆ.
ಬಡವರು, ಮಧ್ಯಮ ವರ್ಗದ ಜನ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್ ಪರೀಷ್ಕರಣೆ ಮಾಡುತ್ತೇವೆ. ಟಿಕೆಟ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿನ್ನೆ ಪ್ರಧಾನಿ ಮೋದಿಯವರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಸಚಿವ ಸೋಮಣ್ಣ ಅವರು ವಂದೇ ಭಾರತ್ ಸೇರಿ ಎಲ್ಲ ರೈಲುಗಳ ಟಿಕೆಟ್ ದರ ಇಳಿಕೆಯ ಸುಳಿವು ನೀಡಿದ್ದಾರೆ.