alex Certify ಸಚಿವರ PA ಹೆಸರಲ್ಲಿ ವಸೂಲಿ: ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರ PA ಹೆಸರಲ್ಲಿ ವಸೂಲಿ: ಇಬ್ಬರು ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮೈಸೂರು ಮೂಲದ ರಘುನಾಥ, ಶಿವಮೂರ್ತಿ ಬಂಧಿತರು. ಕುಶಾಲನಗರ ಕಂದಾಯ ನಿರೀಕ್ಷಕರಿಂದ 20 ಸಾವಿರ ರೂಪಾಯಿ ವಸೂಲಿ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರ ಪಿಎ ಎಂದು ಕಂದಾಯ ನಿರೀಕ್ಷಕ ಸಂತೋಷ್ ಅವರಿಗೆ ರಘುನಾಥ ಫೋನ್ ಮಾಡಿ ಕರೆ ಮಾಡಿದ್ದಾನೆ. ತುರ್ತಾಗಿ 20 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಸಂತೋಷ್ ಗೂಗಲ್ ಪೇ ಮೂಲಕ ಹಣ ಕಳಿಸಿದ್ದಾರೆ. ಸಚಿವರ ಕಚೇರಿಯಲ್ಲಿ ವಿಚಾರಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ.

ನಂತರ ಕಂದಾಯ ನಿರೀಕ್ಷಕ ಸಂತೋಷ್ ಕುಶಾಲನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...