ಬೆಂಗಳೂರು : ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿಯ ಹಣ ಆ ದೇಗುಲಕ್ಕೇ ಬಳಸಬೇಕು, ಮತ್ತೊಂದು ದೇವಸ್ಥಾನಕ್ಕೆ ಬಳಸುವ ಹಾಗಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ಶಕ್ತಿ ಯೋಜನೆ’ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದೇವಸ್ಥಾನಗಳಿಗೆ ಆಗಮಿಸುತ್ತಿದ್ದಾರೆ, ಇದರಿಂದ ದೇವಸ್ಥಾನಗಳ ಹುಂಡಿಗೆ ಸಾಕಷ್ಟು ಕಾಣಿಕೆ ಬರುತ್ತಿದೆ. ಆಯಾ ದೇವಸ್ಥಾನದ ಹುಂಡಿ ಹಣ ಅದೇ ದೇವಸ್ಥಾನಕ್ಕೆ ಸೇರಬೇಕು, ಒಂದು ದೇವಸ್ಥಾನದ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸುವ ಹಾಗಿಲ್ಲ ಎಂದರು.
ಮುಜರಾಯಿ ಇಲಾಖೆ ಅಡಿಯಲ್ಲಿ 34 ಸಾವಿರ ದೇವಸ್ಥಾನಗಳಿವೆ. ದೇವಸ್ಥಾನಗಳ ಹುಂಡಿಗೆ ಸಾಕಷ್ಟು ಹಣ ಬರುತ್ತಿದೆ. ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಈ ಹಿಂದೆ ರಾಜ್ಯದಲ್ಲಿ 80 ಲಕ್ಷ ಜನ ಓಡಾಡುತ್ತಿದ್ದರು, ಈಗ 1 ಕೋಟಿಗೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದಾರೆ ಎಂದರು.