alex Certify BREAKING : ‘ಮುಜರಾಯಿ ದೇವಸ್ಥಾನ’ಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮುಜರಾಯಿ ದೇವಸ್ಥಾನ’ಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಮುಜರಾಯಿ ದೇವಸ್ಥಾನಗಳ ಅನುದಾನ ತಡೆ ಹಿಡಿದ ಆದೇಶ ವಾಪಸ್ ಗೆ ಸಚಿವ ರಾಮಲಿಂಗಾ ರೆಡ್ಡಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದು, ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರವು 2022-23 ನೇ ಸಾಲಿನ ದೇವಸ್ಥಾನಗಳ ಜಿರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುದಾನ ಬಿಡುಗಡೆಗೆ ತಡೆ ಹಿಡಿಯುವಂತೆ ಆದೇಶ ಹೊರಡಿಸಿತ್ತು.ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ ಅನುದಾನ ಬಿಡುಗಡೆಗೆ ಮೂರು ನಿರ್ದೇಶನದ ಮೂಲಕ ಹಣ ಹಂಚಿಕೆ ಮಾಡದಂತೆ. ದೇವಸ್ಥಾನಗಳಿಗೆ ಹಣ ಬಿಡುಗಡೆಗೆ ತಡೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ ಸೂಚನೆ ನೀಡಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಮುಜರಾಯಿ ಇಲಾಖೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಗರಂ ಆಗಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸುತ್ತೇನೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.ಈ ಎಲ್ಲಾ ಬೆಳವಣಿಗೆಗಳ ನಂತರ ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಇಲಾಖೆ ಆಯುಕ್ತರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...