alex Certify ಲಿಫ್ಟ್ ನಲ್ಲಿ ಸಿಲುಕಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಪುತ್ರನ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಿಫ್ಟ್ ನಲ್ಲಿ ಸಿಲುಕಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಪುತ್ರನ ಪರದಾಟ

ಲಿಫ್ಟ್ ಮಧ್ಯದಲ್ಲಿ ನಿಂತುಕೊಂಡ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಮತ್ತವರ ಬೆಂಬಲಿಗರು ಪರದಾಡಿರುವ ಘಟನೆ ಇಂದು ಬೆಳಗಾವಿಯಲ್ಲಿ ನಡೆದಿದೆ.

ರಾಹುಲ್ ನಾಗರಪಂಚಮಿ ಪ್ರಯುಕ್ತ ಬೆಳಗಾವಿ ಜಿಲ್ಲಾಸ್ಪತ್ರೆ ಹೆರಿಗೆ ವಾರ್ಡ್ನಲ್ಲಿ ಹಣ್ಣು ವಿತರಿಸಲು ಹೋದ ಸಂದರ್ಭದಲ್ಲಿ ಲಿಫ್ಟ್ ಅರ್ಧದಲ್ಲಿಯೇ ನಿಂತುಕೊಂಡಿದೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಐದು ಜನ ಹೋಗಬಹುದಾದ ಲಿಫ್ಟ್ ನಲ್ಲಿ 12 ಮಂದಿ ಇದ್ದರೆಂದು ಹೇಳಲಾಗಿದ್ದು, ಬಳಿಕ ಲಿಫ್ಟ್ ನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದೆ. ತಾಂತ್ರಿಕ ದೋಷದಿಂದಾಗಿ ಈ ಸಮಸ್ಯೆ ಉಂಟಾಗಿತ್ತು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...