alex Certify ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿ ಬದಲಾವಣೆ: ಅಚ್ಚರಿ ಹೆಸರು ಸೇರ್ಪಡೆ, 8 ಹೊಸಬರು, 8 ಲಿಂಗಾಯಿತರಿಗೆ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿ ಬದಲಾವಣೆ: ಅಚ್ಚರಿ ಹೆಸರು ಸೇರ್ಪಡೆ, 8 ಹೊಸಬರು, 8 ಲಿಂಗಾಯಿತರಿಗೆ ಸ್ಥಾನ

ಬೆಂಗಳೂರು: ಶುಕ್ರವಾರ ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ 24 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮೂಲಕ ದೆಹಲಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸರ್ಕಸ್ ಯಶಸ್ವಿಯಾಗಿದೆ. ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರು ಸೇರ್ಪಡೆಯಾಗಿದ್ದು, ಪ್ರಭಾವಿಗಳಿಗೆ ಸಚಿವ ಸ್ಥಾನ ಕೈತಪ್ಪಿದೆ.

ಸಂಪುಟ ಸೇರುವ ನೂತನ ಸಚಿವರು.

ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಬೈರತಿ ಸುರೇಶ್, ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಎಸ್.ಎಸ್. ಮಲ್ಲಿಕಾರ್ಜುನ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ರಹೀಮ್ ಖಾನ್, ಡಿ. ಸುಧಾಕರ್, ಎಂ.ಸಿ. ಸುಧಾಕರ್, ಹೆಚ್.ಕೆ. ಪಾಟೀಲ್, ಚೆಲುವರಾಯಸ್ವಾಮಿ, ಕೆ.ಎನ್. ರಾಜಣ್ಣ, ಸಂತೋಷ್ ಲಾಡ್, ಮಧು ಬಂಗಾರಪ್ಪ, ಮಂಕಾಳ ವೈದ್ಯ, ಶಿವರಾಜ ತಂಗಡಗಿ, ಆರ್.ಬಿ. ತಿಮ್ಮಾಪುರ, ಶರಣಬಸಪ್ಪ ದರ್ಶನಾಪುರ, ಶರಣಪ್ರಕಾಶ್ ಪಾಟೀಲ್, ಬೋಸರಾಜು, ಬಿ. ನಾಗೇಂದ್ರ ಸೇರ್ಪಡೆಯಾಗಲಿದ್ದಾರೆ.

ಉಪಸಭಾಪತಿಯಾಗಿ ಪುಟ್ಟರಂಗಶೆಟ್ಟಿ:

ಸಂಪುಟ ಸೇರಲು ಪ್ರಬಲ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರನ್ನು ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಜಾತಿವಾರು ಪ್ರಾತಿನಿಧ್ಯ:

ಸಿದ್ದರಾಮಯ್ಯ ಸಂಪುಟದಲ್ಲಿ 8 ಜನ ಲಿಂಗಾಯಿತರು, 6 ಜನ ಒಕ್ಕಲಿಗರು ಹಾಗೂ ಪರಿಶಿಷ್ಟ ಜಾತಿಯ 6, ಪರಿಶಿಷ್ಟ ಪಂಗಡಕ್ಕೆ 3, ಮುಸ್ಲಿಂ ಮತ್ತು ಕುರುಬ 2, ಕ್ರೈಸ್ತ, ಜೈನ, ಬ್ರಾಹ್ಮಣ, ಮೊಗವೀರ, ಮರಾಠ, ಈಡಿಗ, ತೆಲುಗು ರಾಜು ಸಮುದಾಯಕ್ಕೆ ತಲಾ ಒಂದು ಸ್ಥಾನ ದೊರೆತಿದೆ.

ಈ ಬಾರಿ ಸಂಪುಟಕ್ಕೆ ಸೇರಲಿರುವ ಹೊಸ ಸಚಿವರು:

ಬೈರತಿ ಸುರೇಶ್, ಮಧು ಬಂಗಾರಪ್ಪ, ಕೆ.ಎನ್. ರಾಜಣ್ಣ, ಬಿ. ನಾಗೇಂದ್ರ, ಲಕ್ಷ್ಮಿ ಹೆಬ್ಬಾಳ್ಕರ್, ಮಂಕಾಳ ವೈದ್ಯ, ಎನ್.ಎಸ್. ಬೋಸರಾಜು, ಡಾ.ಎಂ.ಸಿ. ಸುಧಾಕರ್.

ಸಚಿವ ಸ್ಥಾನ ವಂಚಿತ ಹಿರಿಯರು:

ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಆರ್.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ, ಎಂ. ಕೃಷ್ಣಪ್ಪ, ಹೆಚ್.ವೈ. ಮೇಟಿ, ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿ, ಶಿವಲಿಂಗೇಗೌಡರಿಗೂ ಸಚಿವ ಸ್ಥಾನ ಮಿಸ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...