
ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಚಿವ ಸೋಮಶೇಖರ್ ಮಾಹಿತಿ ನೀಡಿದ್ದಾರೆ.
ಆದರೆ, ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ, ಬಿ.ಸಿ. ನಾಗೇಶ್, ಮಾಧುಸ್ವಾಮಿ ಅವರ ಬಳಿಕ ಎಸ್.ಟಿ. ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.