alex Certify ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಶಾಕ್: ಅಕ್ರಮಗಳ ಪತ್ತೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಶಾಕ್: ಅಕ್ರಮಗಳ ಪತ್ತೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಸೇರಿ ಒಟ್ಟು 26 ಹಗರಣಗಳ ಕುರಿತು ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದೆ.

ಎರಡು ತಿಂಗಳ ಒಳಗೆ ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಗೆ ಸೂಚಿಸಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಚಿವರುಗಳಾದ ಡಾ.ಜಿ. ಪರಮೇಶ್ವರ, ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ ಎರಡು ತಿಂಗಳುಗಳ ಒಳಗೆ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...