
ಬೆಂಗಳೂರು: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 2022 ರಲ್ಲಿ ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಒಪ್ಪಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. 2022 ರ ಫೆಬ್ರವರಿಯಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ವೇತನ, ಭತ್ಯೆ ಪರಿಷ್ಕರಣೆ ಮಾಡಲಾಗಿತ್ತು. ಇದುವರೆಗೆ ಸಚಿವರು, ಶಾಸಕರು ಪರಿಷ್ಕೃತ ವೇತನ ಪಡೆಯುತ್ತಿದ್ದರು. ಆದರೆ, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ಪಡೆಯದ ಹಿನ್ನೆಲೆಯಲ್ಲಿ ಘಟನೋತ್ತರ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕಾಯ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.