ಮೈಸೂರು: ಮೈಸೂರಿನಲ್ಲಿ ಅಪ್ರಾಪ್ತರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಅಪ್ರಾಪ್ತ ಮತ್ತೊಬ್ಬ ಅಪ್ರಾಪ್ತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಮೈಸೂರು ನಗರದ ಸುನ್ನಿ ಚೌಕ ಬಳಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು 17 ವರ್ಷದ ಫರ್ವೆಜ್ ಖಾನ್ ನನ್ನು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ 15 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಇಂತಹ ಕೃತ್ಯವೆಸಗಿದ್ದಾನೆ. ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.