ಶಿವಮೊಗ್ಗ: ಅಪ್ರಾಪ್ತೆ ಮದುವೆಯಾದ ಯುವಕ, ಮದುವೆ ಮಾಡಿದ ಪೋಷಕರು ಸೇರಿದಂತೆ ಎಂಟು ಮಂದಿ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಶಿವಮೊಗ್ಗದ ಸಮುದಾಯ ಭವನವೊಂದರಲ್ಲಿ ಅಪ್ರಾಪ್ತೆ ಮದುವೆ ನಡೆಯುತ್ತಿರುವ ಮಾಹಿತಿ ತಿಳಿದ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ 14 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದೆ. ಮದುಮಗ, ಆತನ ಪೋಷಕರು, ಬಾಲಕಿಯ ಪೋಷಕರು, ಮದುವೆ ಮಾಡಿಸಿದ ಅರ್ಚಕ ಸೇರಿದಂತೆ ಎಂಟು ಜನರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.