alex Certify ಮತ್ತೊಬ್ಬ ಅಪ್ರಾಪ್ತೆಗೂ ವಂಚಿಸಿದ್ದ ನಿತೇಶ್ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಬ್ಬ ಅಪ್ರಾಪ್ತೆಗೂ ವಂಚಿಸಿದ್ದ ನಿತೇಶ್ ವಿರುದ್ಧ ದೂರು

ಚಿಕ್ಕಮಗಳೂರು: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೀಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಮತ್ತೊಬ್ಬ ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ ನಿತೇಶ್ ವಂಚಿಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈಗಾಗಲೇ 17 ವರ್ಷದ ಬಾಲಕಿ ಆರೋಪಿ ನಿತೇಶ್ ನಿಂದ ಮೋಸ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕಿ ಆತ್ಮಹತ್ಯೆಯ ನಂತರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬಾಲಕಿ ಸಾವಿನ ನಂತರ ಮತ್ತೊಬ್ಬ ಸಂತ್ರಸ್ತೆ ಆರೋಪಿ ನಿತೇಶ್ ವಿರುದ್ಧ ದೂರು ದಾಖಲಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...