ಕೋಟಾ: ರಾಜಸ್ಥಾನದ ಕೋಟಾ ಜಿಲ್ಲೆಯ ದಾಬಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕಾಮುಕನೊಬ್ಬ ಮಗಳನ್ನೇ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಮೂರ್ನಾಲ್ಕು ತಿಂಗಳ ಕಾಲ ಪದೇ ಪದೇ ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆರೋಪಿ ಮಧ್ಯಪ್ರದೇಶದ ರೈಸನ್ ಜಿಲ್ಲೆಯವನಾಗಿದ್ದು, ಈತ ತನ್ನ 10 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಗ್ರಾಮದ ಸರಪಂಚ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಾಲಕಿ ತಂದೆಯ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ತಂದೆಯ ಕ್ರೂರ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಯ ಆರೋಗ್ಯ ಹದಗೆಟ್ಟಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿಲ್ಲದ ಆರೋಪಿ ಆಗಾಗ ಜಗಳವಾಡುತ್ತಿದ್ದ. ತನ್ನ ತಂದೆಯ ಕೃತ್ಯದ ಬಗ್ಗೆ ಬಾಲಕಿ ನೆರೆಯವರಿಗೆ ವಿಷಯ ತಿಳಿಸಿದ್ದು, ಅವರು ಊರಿನ ಮುಖಂಡರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಸರಪಂಚ್ ವಿಷಯ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಒಂದು ದಿನದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.