ಇಸ್ಲಾಮಾಬಾದ್: ಪಾಕಿಸ್ತಾನದ ಮುಜಾಫರ್ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಕಾಮುಕರು ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಜತೋಯ್ ತೆಹಸಿಲ್ನ ಕೋಟ್ಲಾ ರಹಮ್ ಶಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ .
ಬಾಲಕಿಯ ಬೆತ್ತಲೆ ಫೊಟೋಗಳು ಮತ್ತು ವಿಡಿಯೋಗಳನ್ನು ತೋರಿಸುತ್ತಾ ಬ್ಲ್ಯಾಕ್ಮೇಲ್ ಮಾಡಲಾಗಿದೆ. ಬಾಲಕಿ ಗರ್ಭಿಣಿ ಎಂದು ತಿಳಿದ ಬಳಿಕ ವಿಷಯ ಬೆಳಕಿಗೆ ಬಂದಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾಮುಕರ ಪೈಕಿ ಒಬ್ಬ ಎಂಟು ತಿಂಗಳ ಹಿಂದೆ ಹುಡುಗಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದಿದ್ದ. ನಂತರ ಮೂವರು ಸೇರಿ ರೇಪ್ ಮಾಡಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ಅವರು ಬ್ಲ್ಯಾಕ್ಮೇಲ್ ಮಾಡಲು ಪ್ರಾರಂಭಿಸಿದರು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಮುಂದುವರೆಸಿದರು ಎನ್ನಲಾಗಿದೆ.
ಬಾಲಕಿ ದೂರು ನೀಡಿದ್ದು ವಿಚಾರಣೆ ನಡೆಯುತ್ತಿದೆ.