alex Certify ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭಿಣಿ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭಿಣಿ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾದ ಪ್ರಕರಣದಲ್ಲಿ ಭದ್ರಾವತಿಯ 19 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ 1.10 ಲಕ್ಷ ರೂ. ದಂಡ ವಿಧಿಸಿದೆ.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್. ಮೋಹನ್ ಅವರು, ದಂಡದ ಮೊತ್ತದಲ್ಲಿ ಬಾಲಕಿಗೆ ಒಂದು ಲಕ್ಷ ರೂಪಾಯಿ, ಪರಿಹಾರವಾಗಿ 3 ಲಕ್ಷ ರೂಪಾಯಿ ನೀಡಲು ಆದೇಶಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ ಆರು ತಿಂಗಳು ಸಾದಾ ಸೆರೆವಾಸ ಶಿಕ್ಷೆ ಅನುಭವಿಸಬೇಕಾಗುತ್ತದೆ.

2022 ರಲ್ಲಿ ಘಟನೆ‌ ನಡೆದಿದ್ದು, ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗ ತನಿಖಾಧಿಕಾರಿಯಾಗಿದ್ದ ಭದ್ರಾವತಿ ಟೌನ್ ಸಿಪಿಐ ರಾಘವೇಂದ್ರ ಖಾಂಡಿಕೆ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಾಲಕಿ ಪರವಾಗಿ ಸರ್ಕಾರಿ ವಕೀಲರಾದ ಹರಿಪ್ರಸಾದ್, ಶ್ರೀಧರ್ ವಾದ ಮಂಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...