ಚಿತ್ರದುರ್ಗ: ಅಪ್ರಾಪ್ತ ಬಾಲಕಿಗೆ ಐಸ್ ಕ್ರೀಮ್ ಆಸೆ ತೋರಿಸಿ ಬಾಲಕಿಯನ್ನು ಅಪಹರಣ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಸಾಧಿಕ್ (52) ಎಂಬಾತ ಅಪ್ರಾಪ್ತ ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ಕರೆದಿಯ್ದು, ಆಕೆಯನ್ನು ಅಪಹರಿಸಿ ಅತ್ಯಾಚಾರ ನಡೆಸಲು ಯತ್ನಿಸಿದ್ದ. ಸದ್ಯ ಆರೋಪಿ ಸಾಧಿಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.