alex Certify ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ ಬಾಲಕಿ ಗರ್ಭಿಣಿಯಾದ ಸಂಗತಿ ಬೆಳಕಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ ಬಾಲಕಿ ಗರ್ಭಿಣಿಯಾದ ಸಂಗತಿ ಬೆಳಕಿಗೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರಿನ ಗ್ರಾಮವೊಂದರಲ್ಲಿ ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ 16 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ಉತ್ತರ ಭಾರತ ಮೂಲದ ಕುಟುಂಬದವರು ಯಳಂದೂರು ತಾಲೂಕಿನ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಕುಟುಂಬದ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.

ಜ್ವರ ಬಂದ ಹಿನ್ನೆಲೆಯಲ್ಲಿ ಬಾಲಕಿಯನ್ನು ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿ ಕುಟುಂಬದವರೊಂದಿಗೆ ಆಪ್ತ ಸಮಾಲೋಚನೆ ನಡೆಸಲಾಗಿದೆ.

ಸರಿಯಾದ ಮಾಹಿತಿ ನೀಡದ ಕಾರಣ ಆಕೆಯನ್ನು ಬಾಲಕಿಯರ ಮಂದಿರದಲ್ಲಿ ಇರಿಸಲಾಗಿದ್ದು, ಯಳಂದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...